ದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಆನ್ ಲೈನ್ ಕಾರ್ಯಕ್ರಮದಲ್ಲಿ ದಾಖಲೆ ಮಾಡಿದ್ದಾರೆ. ಮೋದಿ ಕಳೆದ ಸೆಪ್ಟಂಬರ್ ತಿಂಗಳನಿಂದ ನವೆಂಬರ್ ವರೆಗೆ ಮೂರು ತಿಂಗಳ ಅವಧಿಯಲ್ಲಿ 101 ಆನ್ ಲೈನ್ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ ಎಂದು ಸರ್ಕಾರದ ಮೂಲಗಳು ಹೇಳಿವೆ.
ಲೆಕ್ಕಾಚಾರದ ಪ್ರಕಾರ ಮೋದಿ ದಿನಕ್ಕೆ ಒಂದಕ್ಕಿಂತಲೂ ಹೆಚ್ಚು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಮೋದಿ ಈ ವರ್ಷ ಶೇಕಡಾ 25ರಷ್ಟು ತಂತ್ರಜ್ಞಾನವನ್ನು ಬಳಸಿಕೊಂಡಿದ್ದಾರೆ. ಇನ್ನು ಈ ಆನ್ ಲೈನ್ ಕಾರ್ಯಕ್ರಮಗಳಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ, ಕೋವಿಡ್ -19 ಸಾಂಕ್ರಾಮಿಕ ಕುರಿತ ಮುಖ್ಯಮಂತ್ರಿಗಳೊಂದಿಗೆ ಸಮಾವೇಶ, ಅಂತರಾಷ್ಟ್ರೀಯ ನಾಯಕರೊಂದಿಗೆ ಶೃಂಗಸಭೆಗಳು, ಯುವ ಉದ್ಯಮಿಗಳೊಂದಿಗೆ ಸಂವಾದದಂತಹ ಸೇರಿದಂತೆ ಹಲವು ಕಾರ್ಯಕ್ರಮಗಳು ಇದರಲ್ಲಿ ಸೇರಿಕೊಂಡಿವೆ ಎಂದು ಸರ್ಕಾರ ಮೂಲಗಳು ತಿಳಿಸಿವೆ.