ನವದೆಹಲಿ: ಕರೊನಾ ವೈರಸ್ ನಿಂದ ಯಾವಾಗ ಮುಕ್ತಿ ಸಿಗುತ್ತೆ ಅಂತ ಇಡೀ ವಿಶ್ವದ ಜನ ಕಾಯುತ್ತಿದ್ದಾರೆ.. ಆದರೆ ಈಗ ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ ಮಾಹಿತಿಯಿಂದ ಇಡೀ ವಿಶ್ವದ ಜನ ಖುಷಿಯಾಗಿದ್ದಾರೆ.. ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್ ಹೇಳುವ ಪ್ರಕಾರ, ಮುಂದಿನ ಕೆಲವೇ ತಿಂಗಳುಗಳಲ್ಲಿ ಕೊರೊನಾಗೆ ಚಿಕಿತ್ಸೆ ಸಿಗಲಿದೆ ಎಂದು ಹೇಳಿದ್ದಾರೆ..
ಇಡೀ ವಿಶ್ವದಾದ್ಯಂತ ಕೊರೊನಾ ವೈರಸ್ ಗೆ ಚಿಕಿತ್ಸೆ ಕಂಡುಹಿಡಿಯಲಾಗುತ್ತಿದ್ದು, ಇಲ್ಲಿಯವರೆಗೆ 10ಕ್ಕೂ ಹೆಚ್ಚು ವ್ಯಾಕ್ಸಿನ್ ಗಳನ್ನು ತಯಾರು ಮಾಡಲಾಗುತ್ತಿದೆ. ಜೊತೆಗೆ ಇದನ್ನು ಮನುಷ್ಯರ ಮೇಲೂ ಪ್ರಯೋಗ ಮಾಡಲಾಗುತ್ತಿದೆ.. ಒಂದು ವೇಳೆ ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದಿನ ಎರಡು ತಿಂಗಳಲ್ಲಿ ಕೊರೊನಾ ವೈರಸ್ ಚಿಕಿತ್ಸೆ ಸಿಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಸೌಮ್ಯ ಸ್ವಾಮಿನಾಥನ್ ಹೇಳಿದ್ದಾರೆ..
ಈಗಾಗಲೇ ಇಡೀ ವಿಶ್ವದಾದ್ಯಂತ 8.4 ಮಿಲಿಯನ್ ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.. ಇನ್ನು ನಾಲ್ಕು ಲಕ್ಷಕ್ಕೂ ಅಧಿಕ ಮಂದಿ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ..