ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ನಿರಂತರವಾಗಿ ಏರುತ್ತಿರೋ ಹಿನ್ನಲೆ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ಉಪಮುಖ್ಯಮಂತ್ರಿಗಳು, ಹಿರಿಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು.

ಸಭೆಯಲ್ಲಿ ಕಂಟೈನ್ಮೆಂಟ್ ನಿಯಮ ಪಾಲನೆ, ಕೋವಿಡ್ ಕೇರ್ ಸೆಂಟರ್ ನಿರ್ವಹಣೆ, ಬಗ್ಗೆ ಸಭೆಯಲ್ಲಿ ಚರ್ಚಿಸಲಾಯ್ತು. ಇನ್ನು ಬೆಂಗಳೂರಿನಲ್ಲಿ ಉಂಟಾಗಿರೋ ಆಸ್ಪತ್ರೆ ಸಮಸ್ಯೆ ಬಗ್ಗೆ ಸಿಎಂ ಸಚಿವರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದರು. ಮಾತ್ರವಲ್ಲ ಸೋಂಕಿತರಿಗೆ ತಕ್ಷಣ ಚಿಕಿತ್ಸೆ ಸಿಗುವಂತೆ ಕ್ರಮಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸಿಎಂ ಸೂಚನೆ ಸಹ ನೀಡಿದ್ದಾರೆ.

ಇನ್ನು ಬಿಬಿಎಂಪಿ ಕೋವಿಡ್ ನಿರ್ವಹಣೆ ಬಗ್ಗೆ ಸಿಎಂ ಬೇಸರ ವ್ಯಕ್ತಪಡಿಸಿದ್ದು ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ ಅನ್ನೋ ಮಾಹಿತಿಯೂ ಇದೆ. ಸೋಂಕಿತರನ್ನ ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ರವಾನಿಸುವುದು ಹಾಗೂ ಹಾಸಿಗೆ ಕಲ್ಪಿಸುವಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲವಾಗಿದೆ. ಇದರಿಂದಾಗಿ ಸರ್ಕಾರದ ವರ್ಚಸ್ಸಿಗೂ ಕಳಂಕ ಬರ್ತಿದೆ. ಹೀಗಾಗಿ ಸಿಎಂ ತುರ್ತು ಸಭೆ ನಡೆಸಿ ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನ ರವಾನಿಸಿದ್ದಾರೆ. ಇನ್ನು ಡಿಸಿಎಂ ಅಶ್ವಥ್ ನಾರಾಯಣ ಹಾಗೂ ವೈದ್ಯ ಕೀಯ ಶಿಕ್ಷಣ ಸಚಿವ ಡಾ.ಸುಧಾಕರ್, ಹಾಗೂ ರಾಜಕೀಯ ಕಾರ್ಯದರ್ಶಿ ಎಚ್.ಆರ್. ವಿಶ್ವನಾಥ್ ಈ ಸಭೆಯಲ್ಲಿ ಪಾಲ್ಗೊಂಡಿದ್ದರು.