ದೆಹಲಿ: ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಆಗಿದ್ದ ಗುಜರಾತ್ ನ ಪಾರ್ಥಿವ್ ಪಟೇಲ್ ಎಲ್ಲ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ 18 ವರ್ಷಗಳ ಸುದೀರ್ಘ ಕ್ರಿಕೆಟ್ ವೃತ್ತಿ ಜೀವನ ಅಂತ್ಯವಾಗಿದೆ.
35 ವರ್ಷದ ಪಾರ್ಥಿವ್ 25 ಟೆಸ್ಟ್, 38 ಏಕದಿನ ಹಾಗೂ ಎರಡು ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಪಾರ್ಥಿವ್ ಪಟೇಲ್ ದೇಶೀಯ ಕ್ರಿಕೆಟ್ ನಲ್ಲಿ ಗುಜರಾತ್ ಪರ 194 ಪ್ರಥಮ ದರ್ಜೆ ಪಂದ್ಯಗಳನ್ನಾಡಿದ್ದರು.
2002ರಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದ ಅವರು ಟೆಸ್ಟ್ ನಲ್ಲಿ ಅತಿ ಕಿರಿಯ ವಿಕೆಟ್ ಕೀಪರ್ ಎಂಬ ಗೌರವಕ್ಕೆ ಪಾತ್ರರಾಗಿದ್ದರು. 2004ರಲ್ಲಿ ದಿನೇಶ್ ಕಾರ್ತಿಕ್ ಮತ್ತು ಮಹೇಂದ್ರ ಸಿಂಗ್ ಧೋನಿ ಅವರ ಆಗಮದಿಂದ ಪಟೇಲ್ ತಮ್ಮ ಸ್ಥಾನವನ್ನು ಕಳೆದುಕೊಂಡರು. 2018ರಲ್ಲಿ ಪಾರ್ಥಿವ್ ಪಟೇಲ್ ಭಾರತದ ಪರ ಕೊನೆಯ ಪಂದ್ಯವನ್ನಾಡಿದ್ದರು.