ಬೆಂಗಳೂರು: ರಾಜ್ಯಸಭೆ ಚುನಾವಣೆಯ ಬಳಿಕ ವಿಧಾನಪರಿಷತ್ ಚುನಾವಣೆಗೆ ರಾಜ್ಯದ ರಾಜಕೀಯ ಮುಖಂಡರು ಸಜ್ಜಾಗುತ್ತಿದ್ದಾರೆ. ಜೂನ್ 29ರಂದು ಏಳು ಸ್ಥಾನಗಳಿಗೆ ಪರಿಷತ್ ಚುನಾವಣೆ ನಡೆಯಲಿದೆ. ಹೀಗಾಗಿ ಕಾಂಗ್ರೆಸ್ ನಲ್ಲಿ ಈಗಾಗ್ಲೇ ಲಾಭಿ ಶುರುವಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾಜಿ ಸಚಿವ ಎಚ್ ಎಂ ರೇವಣ್ಣರ ಮನೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕುರುಬ ಸಮುದಾಯದ ನಾಯಕರು ಮಾತುಕತೆ ನಡೆಸಿದ್ದಾರೆ. ಎಚ್ ಎಂ ರೇವಣ್ಣಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಮುಸ್ಲಿಂ ಸಮುದಾಯದ ನಾಯಕರು ಕೂಡ ಡಿಕೆ ಶಿವಕುಮಾರ್ ರನ್ನು ಭೇಟಿಯಾಗಿ ಟಿಕೆಟ್ ಗಾಗಿ ಲಾಭಿ ನಡೆಸಿದ್ದಾರೆ.
ಈ ಮೂಲಕ ಬಿಜೆಪಿಯಲ್ಲಿ ಇರುವಂತೆ,ಕಾಂಗ್ರೆಸ್ ನಲ್ಲೂ ಕೂಡ ಟಿಕೆಟ್ ಲಾಬಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.ಪರಿಷತ್ ಪರೀಕ್ಷೆಯಲ್ಲಿ ಕಾಂಗ್ರೆಸ್ ಎಲ್ಲರನ್ನು ಹೇಗೆ ಸಮಾಧಾನಪಡಿಸುತ್ತೆ ಕಾದುನೋಡಬೇಕಾಗಿದೆ