ನವದೆಹಲಿ: ದೇಶದಲ್ಲಿ ಎರಡನೇ ಅತಿ ಹೆಚ್ಚು ಕೊರೊನಾ ಸೋಂಕಿತರನ್ನು ಹೊಂದಿ.. ಆತಂಕದ ದಿನಗಳನ್ನು ಎದುರಿಸುತ್ತಿದ್ದ ದೆಹಲಿಯಿಂದ ಶುಭ ಸುದ್ದಿಯೊಂದು ಹೊರಬಿದ್ದಿದೆ. ದೆಹಲಿಯಲ್ಲಿ ಕಳೆದ ಒಂದು ವಾರದಿಂದ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗ ತೊಡಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ದೆಹಲಿಯಲ್ಲಿ ಸದ್ಯ 87,360 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ರೆ, 61,090 ಮಂದಿ ಕೊರೊನಾ ಗೆದ್ದು ಮನೆಗೆ ಮರಳಿದ್ದಾರೆ. ಸದ್ಯ ದೆಹಲಿಯಲ್ಲಿ 26,270 ಮಂದಿ ಸಕ್ರಿಯ ಸೋಂಕಿತರಿದ್ದಾರೆ. ಇನ್ನು ದೆಹಲಿಯಲ್ಲಿ ಈ ಹಿಂದೆ 100 ಕೊರೊನಾ ಟೆಸ್ಟ್ ಗಳನ್ನು ಮಾಡಿದ್ರೆ ಸರಾಸರಿ 31 ಮಂದಿಗೆ ಕೊರೊನಾ ಪಾಸಿಟಿವ್ ಬರುತ್ತಿತ್ತು. ಆದರೆ ಈ ವಾರದಲ್ಲಿ 100 ಮಂದಿಗೆ ಕೊರೊನಾ ಟೆಸ್ಟ್ ಮಾಡಿದರೆ ಕೇವಲ 13 ಮಂದಿಗೆ ಮಾತ್ರ ಕೊರೊನಾ ಪಾಸಿಟಿವ್ ಬರುತ್ತಿದೆ.. ಇದೊಂದು ಒಳ್ಳೆಯ ಬೆಳವಣಿಗೆಯಾಗಿದೆ.
ದೆಹಲಿಯಲ್ಲಿ ಕೊರೊನಾ ಟೆಸ್ಟ್ ಗಳ ಸಂಖ್ಯೆಯನ್ನು 16 ಸಾವಿರದಿಂದ 21 ಸಾವಿರಕ್ಕೆ ಏರಿಸಲಾಗಿದೆ. ಟೆಸ್ಟ್ ಸಂಖ್ಯೆ ಹೆಚ್ಚಾದಗಲೂ ಕೊರೊನಾ ಪಾಸಿಟಿವ್ ಬರುತ್ತಿರುವ ಸಂಖ್ಯೆ ಇಳಿಮುಖವಾಗಿರುವುದು ಆಶಾದಾಯಕವಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.