ಬೆಂಗಳೂರು: ಕೊರೊನಾದ ನಡುವೆ ನಡೆದ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಇಂದು ಸಂಜೆ 3 ಗಂಟೆಗೆ ಪ್ರಕಟವಾಗಲಿದೆ. ಕೊರೋನಾ ಭೀತಿ ನಡುವೆಯೂ ಸರ್ಕಾರ ಯಶಸ್ವಿಯಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿತ್ತು. ಜೂನ್ 25ರಂದು 8.5 ಲಕ್ಷ ವಿದ್ಯಾರ್ಥಿಗಳಲ್ಲಿ ಸರಾಸರಿ ಶೇ.98ರಷ್ಟು ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದಾರೆ. ಮಾಸ್ಕ್ ಗಳನ್ನು ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಕೋವಿಡ್-19 ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಗುಂಪುಗೂಡಬಾರದು ಎಂಬ ದೃಷ್ಟಿಯಿಂದ ಪ್ರತಿ ವಿದ್ಯಾರ್ಥಿಯ ಮೊಬೈಲ್ ಗೆ ಫಲಿತಾಂಶ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ವೆಬ್ಸೈಟ್ನಲ್ಲೂ ಫಲಿತಾಂಶ ಪ್ರಕಟಿಸಲಾಗುವುದು.
ಈ ಬಾರಿ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಪರೀಕ್ಷೆ ಬರೆದಿದ್ದಾರೆ. ಒಳ್ಳೆಯ ಫಲಿತಾಂಶವೂ ಬರಬೇಕೆಂಬುದು ನಮ್ಮೆಲ್ಲರ ಅಪೇಕ್ಷೆಯಾಗಿದೆ. ಅನುತ್ತೀರ್ಣರಾದವರು ಯಾರು ಸಹ ನಿರಾಶರಾಗುವುದು ಬೇಡ. ಜೀವನದಲ್ಲಿ ಇದೇ ಕೊನೇ ಅಲ್ಲ. ಇದೂ ಒಂದು ಭಾಗ ಅಷ್ಟೆ.
ಸೆಪ್ಟೆಂಬರ್ನಲ್ಲಿ ಪೂರಕ ಪರೀಕ್ಷೆ ನಡೆಸಲಾಗುವುದು. ಜೂನ್, ಜುಲೈನಲ್ಲಿ ನಡೆದ ಪರೀಕ್ಷೆಯಲ್ಲಿ ಕೊರೊನಾ ಕಾರಣದಿಂದ ಸುಮಾರು 16 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ಇವರೆಲ್ಲರನ್ನು ಪೂರಕ ಪರೀಕ್ಷೆಯಲ್ಲಿ ಫ್ರೆಶ್ ಸ್ಟೂಡೆಂಟ್ ಎಂದು ಪರಿಗಣಿಸಲಾಗುವುದು. ಅಂಕಪಟ್ಟಿಯಲ್ಲೂ ಸಹ ಅಟೆಂಪ್ಟ್ ಎಂದು ನಮೂದಿಸುವುದಿಲ್ಲ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ನಿಮ್ಮ ಎಸ್ಎಸ್ಎಲ್ ಸಿ ಫಲಿತಾಂಶಕ್ಕಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ: