ಬೆಂಗಳೂರು- ದೇಶದಲ್ಲಿ ಕೊರೊನಾ ಎರಡನೇ ಅಲೆ ಭೀತಿಯಿದೆ. ಜೊತೆಗೆ ಬ್ರಿಟನ್ ನಿಂದ ವಾಪಾಸಾದ ಹಲವರಲ್ಲಿ ಕೊರೊನಾ ಪತ್ತೆಯಾಗಿದೆ. ಈ ನಡುವೆ ರಾಜ್ಯ ಸರ್ಕಾರಗಳು ಕಟ್ಟೆಚ್ಚರ ವಹಿಸಲಿವೆ.
ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರವೂ ಕೂಡ ಅಲರ್ಟ್ ಘೊಷಣೆ ಮಾಡಿದೆ.ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರವಹಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ನೈಟ್ ಕರ್ಫ್ಯೂ ಸದ್ಯಕ್ಕೆ ಅಗತ್ಯವಿಲ್ಲ
ಇದೇ ವೇಳೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜ್ಯದಲ್ಲಿ ಸದ್ಯಕ್ಕೆ ನೈಟ್ ಕರ್ಫ್ಯೂ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಜನರಲ್ಲಿ ನೈಟ್ ಕರ್ಫ್ಯೂ ಬಗ್ಗೆಯಿದ್ದ ಆತಂಕ ದೂರ ಮಾಡಿದ್ದಾರೆ.