ಟೋಕಿಯೋ: ಜಪಾನ್ ಪ್ರಧಾನಿ ಶಿಂಜೋ ಅಬೆ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೀರ್ಘಕಾಲದ ಅನಾರೋಗ್ಯದ ಸಮಸ್ಯೆಯಿಂದಾಗಿ ರಾಜೀನಾಮೆ ನೀಡಲು ಶಿಂಜೋ ನಿರ್ಧರಿಸಿದ್ದಾರೆ. ಜಪಾನ್‌ನ ಸುದೀರ್ಘ ಅವಧಿಯ ಪ್ರಧಾನ ಮಂತ್ರಿ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಬೆ, ಒಂದು ದಶಕಕ್ಕೂ ಹೆಚ್ಚು ಕಾಲದಿಂದ ಅಲ್ಸರೇಟಿವ್ ಕೊಲೈಟಿಸ್‌ನಿಂದ ಬಳಲುತ್ತಿದ್ದಾರೆ.
ಜಪಾನ್‌ನ ಮುಖ್ಯ ಕ್ಯಾಬಿನೆಟ್ ಕಾರ್ಯದರ್ಶಿ ಯೋಶಿಹಿದೆ ಸುಗಾ ಈ ಮಾಹಿತಿಯನ್ನು ನೀಡಿದ್ದಾರೆ. ಇನ್ನು ಅಬೆ ಅವರ ಆಡಳಿತಾವಧಿ 2021 ಸೆಪ್ಟೆಂಬರ್ ಗೆ ಕೊನೆಯಾಗಲಿದೆ.