ಬೆಂಗಳೂರು: ಕೊರೊನಾ ವೈರಸ್ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಜನತೆಯ ಬಳಿ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.. ತೀವ್ರವಾಗಿ ಹರಡುತ್ತಿರುವ ಕೋವಿಡ್ ಸೋಂಕು ಮುಂದಿನ ಹಂತಗಳಲ್ಲಿ ಹರಡದಂತೆ ತಡೆಯಲು ಹೋಮ್ ಕ್ವಾರಂಟೈನ್ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಿ ಕಡ್ಡಾಯಗೊಳಿಸಲಾಗಿದೆ..
ಈ ಹಿನ್ನೆಲೆಯಲ್ಲಿ ನಿಯಮಗಳ ಪಾಲನೆಯ ಮೇಲ್ವಿಚಾರಣೆ ನಡೆಸಲು ಸ್ವಯಂ ಸೇವಕರಾಗಿ ನೀವೂ ಕೈಜೋಡಿಸಲು ಬೆಂಗಳೂರಿನ ಜನತೆಗೆ ಮನವಿ ಮಾಡಿಕೊಂಡಿದ್ದಾರೆ.. ಸರ್ಕಾರದ ಹೋರಾಟದೊಂದಿಗೆ ಜೊತೆಯಾಗಲು ಸ್ವಯಂಪ್ರೇರಿತರಾಗಿ ನೋಂದಾಯಿಸಿಕೊಳ್ಳುವ ಮೂಲಕ ಸೋಂಕು ನಿಯಂತ್ರಿಸುವ ಕೆಲಸದಲ್ಲಿ ಕೈಜೋಡಿಸಬಹುದು ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ..
ಬಿಬಿಎಂಪಿಯ ನಾಗರಿಕ ಕ್ವಾರಂಟೈನ್ ಸ್ಕ್ವಾಡ್ ಸದಸ್ಯರಾಗಲು ನಿಮ್ಮ ಮೊಬೈಲ್ ಸಂಖ್ಯೆಯನ್ನು ಕೆಳಗಿನ ಲಿಂಕ್ ನಲ್ಲಿ ದಾಖಲಿಸಿ ನೋಂದಾಯಿಸಿಕೊಳ್ಳಬಹುದು.