ಬೆಂಗಳೂರು: ಕೊರೊನಾ ಎರಡನೇ ಅಲೆ ಭೀತಿ ಹಾಗೂ ಹೊಸ ವರ್ಷದಾಚರಣೆ ಹಿನ್ನಲೆ ರಾಜ್ಯದಲ್ಲಿ ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಜನವರಿ 2ರವರೆಗೆ ರಾತ್ರಿ ಕರ್ಫ್ಯೂ ಜಾರಿ!
ರಾತ್ರಿ ಹನ್ನೊಂದರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ!
ಸಮಾರಂಭಗಳು ಮತ್ತು ಸಂಭ್ರಮಾಚರಣೆಗಳಿಗೂ ನಿಷೇಧ ಹೇರಲಾಗಿದೆ. ಜೊತೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಕರ್ಫ್ಯೂ ರಾತ್ರಿ ಹನ್ನೊಂದರಿಂದ ಬೆಳಗ್ಗೆ 5ರವರೆಗೆ ಜಾರಿಗೊಳಿಸಲು ನಿರ್ಧಾರ.
ಯುಕೆಯಿಂದ ಬಂದವರ ಮೇಲೆ 28 ದಿನ ನಿಗಾ ಇಡಲು ರಾಜ್ಯ ಸರ್ಕಾರ ಸೂಚಿಸಿದೆ.
ಜನವರಿ 1ರಿಂದ ಶಾಲಾ ಕಾಲೇಜು ಆರಂಭ!
ರಾತ್ರಿ ಕರ್ಫ್ಯೂ ವಿಧಿಸಿದ್ರೂ ಕೂಡ ಶಾಲಾ ಕಾಲೇಜುಗಳನ್ನು ಜನವರಿ ಒಂದರಿಂದ ಆರಂಭಿಸಲು ನಿರ್ಧರಿಸಲಾಗಿದೆ.
ಈ ಮೂಲಕ ರಾಜ್ಯ ಸರ್ಕಾರ ಕ್ರಿಸ್ಮಸ್ ಮತ್ತು ಹೊಸವರ್ಷದ ಸಂಭ್ರಮಾಚರಣೆಗೆ ಬ್ರೇಕ್ ಹಾಕಿದೆ.