ತಿರುವನಂತಪುರ- ಚಿನ್ನದ ಅಕ್ರಮ ಸಾಗಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಉನ್ನತ ಶಿಕ್ಷಣ ಸಚಿವ ಕೆ ಟಿ ಜಲೀಲ್ ಅವರನ್ನು ಜಾರಿ ನಿರ್ದೇಶನಾಲಯ ತನಿಖೆಗೊಳಪಡಿಸಿದೆ. ಈ ಹಿನ್ನಲೆಯಲ್ಲಿ ಜಲೀಲ್ ರಾಜೀನಾಮೆಗೆ ಒತ್ತಾಯಿಸಿ, ವಿರೋಧ ಪಕ್ಷಗಳಿಂದ ಪ್ರತಿಭಟನೆಗಳು ನಡೆದವು.
ರಕ್ತ ಚಿಮ್ಮಿದರೂ ನಿಲ್ಲದ ಮಹಿಳೆಯರ ಪ್ರತಿಭಟನೆ
ಜಲೀಲ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಈ ವೇಳೆ ಪ್ರತಿಭಟನಾಕಾರರನ್ನು ಹತ್ತಿಕ್ಕಲು ಅಶ್ರುವಾಯು ಪ್ರಯೋಗಿಸಲಾಯ್ತು. ಇದರಿಂದಾಗಿ ಪ್ರತಿಭಟನೆ ಮತ್ತಷ್ಟು ಹಿಂಸಾರೂಪಕ್ಕೆ ತಿರುಗಿದೆ. ಪ್ರತಿಭಟನೆಯಲ್ಲಿ ಬಿಜೆಪಿಯ ಮಹಿಳಾ ಮೋರ್ಚದ ಸದಸ್ಯರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ರು. ಇವರ ಮೇಲೂ ಅಶ್ರುವಾಯು ಪ್ರಯೋಗ, ಲಾಠಿ ಚಾರ್ಜ್ ಮಾಡಲಾಗಿತ್ತು.

ಈ ವೇಳೆ ಮಹಿಳೆಯರು ತೀವ್ರ ಗಾಯಗೊಂಡಿದ್ದಾರೆ. ಪ್ರತಿಭಟನೆ ವೇಳೆ ರಕ್ತ ಚಿಮ್ಮಿದರೂ ಕೂಡ ಹೋರಾಟದ ಕಿಚ್ಚು ನಿಂತಿಲ್ಲ. ಪ್ರತಿಭಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಒಟ್ಟಾಗುತ್ತಿರುವುದರಿಂದ, ಕೇರಳ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಜೊತೆಗೆ ಪ್ರತಿಭಟನೆ ವೇಳೆ ಗಾಯಗೊಂಡವರೂ ಮತ್ತೆ ಪ್ರತಿಭಟನಾ ಕಾರರನ್ನು ಸೇರಿಕೊಳ್ಳುತ್ತಿರುವುದರಿಂದ, ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುವ ಭೀತಿಯಿದೆ. ಹೆಚ್ಚಿನ ಫೋಟೋಗಳು ಈ ಕೆಳಗಿವೆ

