ಮಂಗಳೂರು- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದ ಅಟ್ಟಹಾಸ ಮಿತಿ ಮೀರುತ್ತಿದೆ. ಹಳ್ಳಿಯಲ್ಲಿ, ಪೊಲೀಸ್ ಠಾಣೆಯಲ್ಲಿ, ಮೀನು ಮಾರುವವರಲ್ಲಿಯೂ ಕೂಡ ಕೊರೊನಾ ಕಾಣಿಸಿಕೊಳ್ಳುತ್ತಿದೆ. ಈಗ ಮಂಗಳೂರಿನ ಕೇಂದ್ರ ಕಾರಾಗೃಹದಲ್ಲಿದ್ದ ಖೈದಿಗೂ ಕೂಡ ಕೊರೊನಾ ಪಾಸಿಟಿವ್ ಬಂದಿದೆ ಎನ್ನಲಾಗಿದೆ.

ಕೇಂದ್ರ ಕಾರಾಗೃಹದಲ್ಲಿದ್ದ ವಿಚಾರಾಣಾಧೀನ ಖೈದಿಯನ್ನು ಮನೋರೋಗದ ಹಿನ್ನಲೆಯಲ್ಲಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಖೈದಿಗೆ ಕೊರೊನಾ ಇರೋದು ಗೊತ್ತಾಗಿದೆ. ಈಗ ವೆನ್ಲಾಕ್ ಆಸ್ಪತ್ರೆಯಿಂದ ಸಿಬ್ಬಂದಿಯಿಂದ ಕೊರೊನಾ ಹಬ್ಬಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಖೈದಿ ಜೊತೆಗಿರುವ ಪೊಲೀಸ್ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಈ ಒಂದು ಪ್ರಕರಣ ಮಂಗಳೂರಿನಲ್ಲಿ ಮತ್ತಷ್ಟು ಆತಂಕ ಹೆಚ್ಚಾಗುವಂತೆ ಮಾಡಿದೆ.