ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸಿಎಂ ಎಲ್ಲಾ ಕಾರ್ಯಕ್ರಮಗಳನ್ನು ವಿಧಾನಸೌಧಕ್ಕೆ ಸ್ಥಳಾಂತರ ಮಾಡಲಾಗಿದೆ.. ಸಿಎಂ ನಿವಾಸ ಕೃಷ್ಣದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಲೇಡಿ ಪೊಲೀಸ್ ಕಾನ್ ಸ್ಟೇಬಲ್ ನ ಪತಿಗೆ ಕೊರೊನಾ ಪಾಸಿಟಿವ್ ಪತ್ತೆಯಾದ ಬೆನ್ನಲ್ಲೇ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ..
ಲೇಡಿ ಕಾನ್ ಸ್ಟೇಬಲ್ ಕಳೆದ ಸುಮಾರು ದಿನಗಳಿಂದ ಸಿಎಂ ಗೃಹಚೇರಿ ಕೃಷ್ಣಾದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ ಕಳೆದ ಕೆಲ ದಿನಗಳ ಹಿಂದೆ ಈಕೆಯ ಪತಿಗೆ ಕೊರೊನಾ ಸೋಂಕು ಅಂಟಿಕೊಂಡಿತ್ತು.. ಹೀಗಾಗಿ ಸುರಕ್ಷತೆಯ ದೃಷ್ಟಿಯಿಂದ ಸಿಎಂರ ಎಲ್ಲಾ ಕಾರ್ಯಕ್ರಮಗಳನ್ನು ವಿಧಾನಸೌಧಕ್ಕೆ ಶಿಫ್ಟ್ ಮಾಡಲಾಗಿದೆ.. ಇನ್ನು ಕೃಷ್ಣಾದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾನ್ ಸ್ಟೇಬಲ್ ಲೇಡಿಯನ್ನು ಕ್ವಾರಂಟೈನ್ ಮಾಡಲಾಗಿದೆ..
ಮುಂಜಾಗೃತಾ ಕ್ರಮವಾಗಿ ಸಿಎಂ ಗೃಹಕಚೇರಿಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುತ್ತಿದೆ.. ಹೀಗಾಗಿ ಯಾರೂ ಕೂಡ ಪ್ರವೇಶ ಮಾಡದಂತೆ ಎಚ್ಚರಿಕೆ ವಹಿಸಲಾಗಿದೆ..