ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ಆರ್ಭಟ ಜೋರಾಗಿದೆ.. ಕಳೆದ 24 ಗಂಟೆಯಲ್ಲಿ ಬೆಂಗಳೂರಿನ 22 ಮಂದಿ ಪೊಲೀಸರಿಗೆ ಕೊರೊನಾ ಸೋಂಕು ಪತ್ತೆಯಾಗಿರುವುದು ದೃಢಪಟ್ಟಿದೆ.. ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಮ್ಮ ಸಿಬ್ಬಂದಿಗಳ ಸುರಕ್ಷತೆಯ ದೃಷ್ಟಿಯಿಂದ ಕೆಲವೊಂದಿಷ್ಟು ಕ್ರಮಗಳನ್ನು ಕೈಗೊಂಡಿದ್ದಾರೆ..
ವಿಲ್ಸನ್ ಗಾರ್ಡನ್ ಸಂಚಾರಿ ಪೊಲೀಸ್ ಠಾಣೆಯ ಎಎಸ್ಐ ಕೊರೊನಾ ಸೋಂಕಿಗೆ ಶನಿವಾರ ಬಲಿಯಾಗಿದ್ದರು.. ನಗರದ ಕೆಲವೊಂದು ಠಾಣೆಗಳಲ್ಲಿ ಸಿಬ್ಬಂದಿಗಳು ಸೋಂಕಿಗೆ ಒಳಗಾಗುತ್ತಿದ್ದಾರೆ.. ಈ ನಿಟ್ಟಿನಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಕೆಲವು ಕ್ರಮಗಳನ್ನು ತೆಗೆದುಕೊಂಡಿದ್ದಾರೆ..
ಪೊಲೀಸರ ಸುರಕ್ಷತೆಗೆ 5 ಸೂತ್ರ:
- 55 ವರ್ಷ ಮೇಲ್ಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ವೇತನ ಸಹಿತ ರಜೆ ಕೊಡುವಂತೆ ಭಾಸ್ಕರ್ ರಾವ್ ಸೂಚನೆಯನ್ನು ನೀಡಿದ್ದಾರೆ.. ಜೊತೆಗೆ ಮನೆಯಲ್ಲೇ ಇರುವಂತೆ ಸೂಚಿಸಲಾಗಿದೆ..
- ಪ್ರತಿ ಠಾಣೆಯ ಹೊರಗೆ ಶಾಮಿಯಾನ ಹಾಕಿ ಅಲ್ಲಿಯೇ ಜನರ ಸಮಸ್ಯೆಯನ್ನು ಆಲಿಸಬೇಕು. ಸಾಮಾಜಿಕ ಅಂತರ, ಮಾಸ್ಕ್, ಗ್ಲೌಸ್ ಕಡ್ಡಾಯವಾಗಿ ಬಳಸಬೇಕು.
- ಸಾರ್ವಜನಿಕರಿಗೆ ಪೊಲೀಸ್ ಠಾಣೆಯ ಒಳಗೆ ಪ್ರವೇಶವನ್ನು ನಿರಾಕರಿಸಲಾಗಿದೆ.. ದೂರು ದಾಖಲು ಮಾಡಲು ಬರುವ ಪ್ರತಿಯೊಬ್ಬರಿಗೂ ಸ್ಕ್ರೀನಿಂಗ್ ಕಡ್ಡಾಯವಾಗಿ ಮಾಡಬೇಕು.
- ಉನ್ನತ ಅಧಿಕಾರಿಗಳು ಅನಗತ್ಯವಾಗಿ ಆರೋಪಿಗಳನ್ನು ಬಂಧಿಸಬೇಡಿ..
- ಪ್ರತಿಯೊಬ್ಬ ಇನ್ಸ್ ಪೆಕ್ಟರ್ ಗಳು ತಮ್ಮ ಸಿಬ್ಬಂದಿಗಳ ಬಗ್ಗೆ ನಿಗಾ ವಹಿಸಬೇಕು. ಜೊತೆಗೆ ಮನೆಯಲ್ಲಿ ಇರುವ ಸಿಬ್ಬಂದಿಗಳ ಮಾಹಿತಿಯನ್ನು ಸಂಬಂಧಪಟ್ಟ ಡಿಸಿಪಿಗಳಿಗೆ ನೀಡಬೇಕು.